Chikkaballapur : ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ್ (Poshan Abhiyaan) ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುತ್ತಿಗೆ ಆಧಾರ ಮೇಲೆ ಭರ್ತಿ ಮಾಡಿಕೊಳ್ಳಲು (Vacancy) ಅರ್ಜಿ ಆಹ್ವಾನಿಸಲಾಗಿದೆ. ಒಂದು ಸಂಯೋಜಕ ಹುದ್ದೆ, ಮೂರು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳು ದೊರೆಯಲಿವೆ. ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜನವರಿ 24 ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ 08156-277111 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.