Home News Chikkaballapur ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

0
338
Anganwadi Workers Protest Chikkaballapur

Chikkaballapur : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಆರೋಗ್ಯ ಸಮೀಕ್ಷಾ ವರದಿ ಮಾಡಲು ಹೊಸ ಮೊಬೈಲ್ ವಿತರಣೆ, ಕನಿಷ್ಠ ವೇತನ ಜಾರಿ ಸೇರಿದಂತೆ ಇನ್ನಿತರ ಬೇಡಿಕೆಗಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಅಂಗನವಾಡಿ ನೌಕರರು ಜಿಲ್ಲೆಯಾದ್ಯಂತ ಪ್ರತಿಭಟನೆ (Anganwadi Workers Protest) ನಡೆಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿ ಮೊಬೈಲ್‌ಗಳನ್ನು ವಾಪಸ್ ನೀಡಲು ಮುಂದಾದರು. ಆದರೆ ಅಧಿಕಾರಿಗಳು ಆ ಮೊಬೈಲ್‌ಗಳನ್ನು ವಾಪಸ್ ಪಡೆಯಲಿಲ್ಲ.

ಶಿಡ್ಲಘಟ್ಟ

Anganwadi Workers Protest Sidlaghatta

ಶಿಡ್ಲಘಟ್ಟ ನಗರದ ಸಾರಿಗೆ ಬಸ್ ನಿಲ್ದಾಣದಿಂದ ಅಂಗನವಾಡಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮೂಲಕ ತೆರಳಿ ಶಿರಸ್ತೇದಾರ್ ಆಸೀಯಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಾಗೇಪಲ್ಲಿ

Anganwadi Workers Protest Bagepalli

ಅಂಗನವಾಡಿ ನೌಕರರ ಸಂಘ ತಾಲ್ಲೂಕು ಸಮಿತಿ (ಸಿಐಟಿಯು) ನೇತೃತ್ವದಲ್ಲಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಬಾಗೇಪಲ್ಲಿ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಗೌರಿಬಿದನೂರು

Anganwadi Workers Protest Gouribidanur

ಗೌರಿಬಿದನೂರು ನಗರದ ಹೊರವಲಯದ ತಾಲ್ಲೂಕು ಕಚೇರಿಯ ಎದುರು ಹಲವು ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!