Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ (District Hospital) ಭಾನುವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊ ಹನಿ ಅಭಿಯಾನಕ್ಕೆ (Pulse Polio Vaccination) ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ (MTB Nagaraj) ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr. K. Sudhakar) ಆಸ್ಪತ್ರೆಗೆ ಬಂದ ಸಚಿವರು 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೊ ಹನಿ ಹಾಕಿ ಚಾಲನೆ ನೀಡಿದರು. ನಂತರ ಪಲ್ಸ್ ಪೋಲಿಯೊ ಅಭಿಯಾನದ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha), ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್ (Zilla Panchayat CEO P. Shivashankar), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ (SP G. K. Mithun Kumar), ನಗರಸಭೆ ಅಧ್ಯಕ್ಷ ಆನಂದ್ ರೆಡ್ಡಿ ಬಾಬು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್. ಕಬಾಡೆ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್, ಉಪವಿಭಾಗಾಧಿಕಾರಿ ಜಿ. ಸಂತೋಷ್‌ಕುಮಾರ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur