Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮುಸ್ಲಿಮರು ಗುರುವಾರ ರಂಜಾನ್ (Ramzan) ಹಬ್ಬವನ್ನು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಡಗರ ಮತ್ತು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಚಿಕ್ಕಬಳ್ಳಾಪುರ ನಗರದ ಬಿ.ಬಿ.ರಸ್ತೆಯ ಜೂನಿಯರ್ ಕಾಲೇಜ್ ಮುಂಭಾಗದ ಮಸೀದಿಯಿಂದ ಮೆರವಣಿಗೆಯ ಮೂಲಕ ಎಂ.ಜಿ.ರಸ್ತೆ ಮಾರ್ಗವಾಗಿ ಸಾಗಿ ಪ್ರಶಾಂತ್‌ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಚಿಂತಾಮಣಿ:
![Ramzan chintamani](https://chikkaballapur.com/wp-content/uploads/2024/04/12AprCMY-1024x683.jpg)
ಚಿಂತಾಮಣಿ ಮತ್ತು ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಗುರುವಾರ ಈದ್-ಉಲ್-ಫಿತ್ರ್ ಹಬ್ಬವನ್ನು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಬಾಗೇಪಲ್ಲಿ:
ಬಾಗೇಪಲ್ಲಿ ಪಟ್ಟಣ ಹಾಗೂ ತಾಲ್ಲೂಕಿನ ಮುಸ್ಲಿಂ ಸಮುದಾಯದವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ, ಪರಸ್ಪರ ಈದ್ ಮುಬಾರಕ್ ಹಂಚಿಕೊಂಡರು.
ಗುಡಿಬಂಡೆ:
ಗುಡಿಬಂಡೆ ನಗರದ ಈದ್ಗಾ ಮೈದಾನದಲ್ಲಿ ಗುರುವಾರ ಮುಸ್ಲಿಂ ಸಮುದಾಯದವರು ಈದ್ ಉಲ್ ಫಿತ್ರ್ ಹಬ್ಬದ ಅಂಗವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಚೇಳೂರು:
ಚೇಳೂರು ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ಈದ್ ಉಲ್ ಫಿತ್ರ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಶಿಡ್ಲಘಟ್ಟ :
ಶಾಂತಿ ಮತ್ತು ಸೌಹಾರ್ದದ ಸಂಕೇತವಾಗಿರುವ ಪವಿತ್ರ ಈದ್ ಉಲ್ ಫಿತ್ರ್ ಹಬ್ಬವನ್ನು ಸಹಸ್ರಾರು ಮುಸ್ಲಿಮರು ಶ್ರದ್ಧಾಭಕ್ತಿಯಿಂದ ಗುರುವಾರ ಆಚರಿಸಿದರು .