Chikkaballapur : SAKALA ದಡಿ ಅರ್ಜಿಗಳ ವಿಲೇವಾರಿ ಕುರಿತಂತೆ ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಿ ರಾಜ್ಯ ಸರ್ಕಾರ (Government of Karnataka) ಪ್ರತಿ ತಿಂಗಳು ರ‍್ಯಾಂಕ್ ಪಟ್ಟಿ ಪ್ರಕಟಿಸುತ್ತದೆ. ಸರ್ಕಾರ ಬಿಡುಗಡೆಗೊಳಿಸಿದ್ದ 2022ರ ಜನವರಿ ತಿಂಗಳ ಪ್ರಗತಿಯ ಅಂಕಿ ಅಂಶಗಳ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯು 47ನೇ ಬಾರಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ (First Place) ಪಡೆದಿದೆ.
ಈ ಕುರಿತು ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha) ಮಾಹಿತಿ ನೀಡಿದ್ದು ” ಜನವರಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 68,667 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ 67,722 ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದ್ದು, 4,071 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತಗೊಂಡಿವೆ. 2,217 ಅರ್ಜಿಗಳು ವಿಲೇವಾರಿ ಆಗುವುದು ಬಾಕಿಯಿದೆ.
ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿ ಆಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ. ಈ ಯೋಜನೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಸಹಕಾರಿಯಾಗಿದೆ. ಸಕಾಲ ಯೋಜನೆ ಆರಂಭದಿಂದ ಇಲ್ಲಿಯವರೆಗೆ ಜಿಲ್ಲಾಡಳಿತವು ಒಟ್ಟು 20,98,381 ಅರ್ಜಿಗಳನ್ನು ಸ್ವೀಕರಿಸಿ 20,76,286 ಅರ್ಜಿಗಳನ್ನು ಶೇ 98.94 ಸರಾಸರಿಯಲ್ಲಿ ವಿಲೇವಾರಿ ಮಾಡಿದ್ದು 47 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನಗಳಿಸಿದೆ ” ಎಂದು ಹೇಳಿದರು.
ಜನವರಿ-2022 ರ ಮಾಹೆಯ ಸಕಾಲ ಸೇವೆಯಲ್ಲಿ ನಮ್ಮ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. pic.twitter.com/isvPzzvdc6— DeputyCommissionerChikkaballapur (@dc_ckbpur) February 2, 2022
ಜನವರಿ-2022 ರ ಮಾಹೆಯ ಸಕಾಲ ಸೇವೆಯಲ್ಲಿ ನಮ್ಮ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. pic.twitter.com/isvPzzvdc6
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com