Chikkaballapur : ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Government School) ಹಾಗೂ ಬ್ರೈಟ್ ಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಜಾನಪದ ಪರಿಷತ್ ಹಮ್ಮಿಕೊಂಡಿದ್ದ ಸಂಕ್ರಾಂತಿ ಸುಗ್ಗಿ ಕಾರ್ಯಕ್ರಮವನ್ನು (Sankranti Suggi) ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷೆ ಉಷಾ ಶ್ರೀನಿವಾಸ್‌ಬಾಬು ಉದ್ಘಾಟಿಸಿ ಸಂಕ್ರಾಂತಿ ಸುಗ್ಗಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಮಕ್ಕಳಿಗೆ ವೇಷಭೂಷಣ ಸ್ಪರ್ಧೆ, ಹೂ ಕಟ್ಟುವಿಕೆ, ಜಾನಪದ ಗೀತೆಗಳ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಧ್ಯಕ್ಷೆ ಉಷಾ ಶ್ರೀನಿವಾಸ್‌ಬಾಬು “ಗ್ರಾಮೀಣರ ಹಬ್ಬ ಸಂಕ್ರಾಂತಿ, ಹಬ್ಬದ ಆಚರಣೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕಾಗಿದೆ. ತನ್ನದೇ ಆದ ಇತಿಹಾಸ, ಆಚರಣೆಗಳ ಮಹತ್ವ ಮತ್ತು ಹಿನ್ನೆಲೆಯನ್ನು ತಿಳಿದು ನಮ್ಮ ಸಂಪ್ರದಾಯದ ಪ್ರತಿಬಿಂಬಗಳಾದ ಹಬ್ಬಗಳನ್ನು ಆಚರಿಸಬೇಕು. ಜಿಲ್ಲೆಯಲ್ಲಿ ಜಾನಪದ ಕಲೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಪರಿಷತ್ ಹೆಜ್ಜೆ ಇಟ್ಟಿದ್ದು ಮಕ್ಕಳಲ್ಲಿ ಜಾನಪದ ಕಲೆಗಳ ಅರಿವು ಮೂಡಿಸಲು ಮುಂದಿನ ದಿನಗಳಲ್ಲಿ ಶಾಲೆಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಹೇಳಿದರು.
ಜಿಲ್ಲಾ ಜಾನಪದ ಪರಿಷತ್ ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಜನಾರ್ದನ್, ಮಂಜುನಾಥ ಗೌಡ, ಮೊಬೈಲ್ ಬಾಬು, ಶಂಕರ್ ಪ್ರಸಾದ್, ಮುಖ್ಯಶಿಕ್ಷಕರಾದ ಸುಧಾ, ರುಕ್ಸಾನ ಬೇಗಂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur