Chikkaballpaur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ (Deputy Commissioner Office) ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್ ರವರ ಉಪಸ್ಥಿತಿಯಲ್ಲಿ ಮಂಗಳವಾರ ಸವಿತಾ ಮಹರ್ಷಿ ಜಯಂತಿ (Savita Maharshi Jayanti) ಕಾರ್ಯಕ್ರಮ ನಡೆಯಿತು.
ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಎಚ್. ಅಮರೇಶ್ ” ಶಿವನ ದಿವ್ಯ ದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿದ್ದರು ಕಷ್ಟದ ಸಮಸ್ಯೆಗಳನ್ನು ಎದುರಿಸಲು ವಿದ್ಯೆಯಿಂದ ಮಾತ್ರ ಸಾಧ್ಯ. ಅವರ ವಿಚಾರಗಳನ್ನು ಅಳವಡಿಸಿಕೊಂಡು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತರುವುದು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸವಿತಾ ಸಮಾಜ ಸಂಘದ ಕಾರ್ಯದರ್ಶಿ ಮುನಿನಾರಾಯಣಪ್ಪ, ಸವಿತಾ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ, ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜು, ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.