Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Scholarship), ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31 ರಿಂದ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು www.ssp.postmatric.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಆದೇಶಗಳ ಮಾಹಿತಿ ಗಾಗಿ www.bcwd.karnataka.gov.in ವೆಬ್‌ಸೈಟ್ ಅಥವಾ 8050770005/8050770004 ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಅಥವಾ 08156-277053 ಸಂಪರ್ಕಿಸಬಹುದು.