Chikkaballapur : ಚಿಕ್ಕಬಳ್ಳಾಪುರ ನಗರದ SJCIT College ಆವರಣದಲ್ಲಿ ಮೇ 14, 15 ರಂದು ನಡೆಯಲಿರುವ ಬೃಹತ್ ಆರೋಗ್ಯ ಮೇಳದ (Health Camp) ಪೂರ್ವ ತಯಾರಿ ಕಾರ್ಯಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (Health & Family Welfare Department) ಆಯುಕ್ತ ಡಿ.ರಂದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರೋಗ್ಯ ಮೇಳಕ್ಕೆ ಸಿದ್ಧತೆಗೊಳ್ಳುತ್ತಿರುವ ಕಾಲೇಜು ಆವರಣದ ಪ್ರತಿ ಬ್ಲಾಕ್‌ನ ಕಟ್ಟಡಗಳಿಗೆ, ಹೊರಾಂಗಣ ಸ್ಥಳಗಳಿಗೆ ಭೇಟಿ ನೀಡಿ ಮೇಳದ ಸಿದ್ಧತೆಗಳ ಕುರಿತು ಪ್ರಗತಿ ಪರಿಶೀಲಿಸಿದ ಅವರು, ಪೂರ್ವ ತಯಾರಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha), ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ (Zilla Panchayat CEO P. Shivashankar), ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್. ಕಬಾಡೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur