Chikkaballapur: ಚಿಕ್ಕಬಳ್ಳಾಪುರ ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಬಾಲ ಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಬೇಸಿಗೆ ಶಿಬಿರ (Summer Camp) ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ “. 2025-26ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. 15 ದಿನಗಳ ಕಾಲ ಶಿಬಿರ ನಡೆಯಲಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಪ್ರತಿ ದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಶಿಬಿರ ನಡೆಯಲಿರುವ ಶಿಬಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸಲಾಗುವುದು. ಚಿಕ್ಕ ವಯಸ್ಸಿನ ಮಕ್ಕಳಿಗೆ ನಮ್ಮ ಕಲೆ, ಸಂಸ್ಕೃತಿಯನ್ನು ಪರಿಚಯಿಸಬೇಕಿದೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್. ಗಂಗಾಧರಯ್ಯ, ಬಾಲಕಿಯರ ಸರ್ಕಾರಿ ಬಾಲ ಮಂದಿರದ ಅಧೀಕ್ಷಕಿ ಗಾಯಿತ್ರಿದೇವಿ, ಸಮಾಜ ಕಾರ್ಯಕರ್ತ ಕೆ. ಮಂಜುನಾಥ್, ಜಿಲ್ಲಾ ಬಾಲ ಭವನದ ಸಿಬ್ಬಂದಿ ಪವಿತ್ರಾಮ, ಪವನ್ ಕಲ್ಯಾಣ್, ಶ್ರೀನಿವಾಸ್, ನಿಖಿತಾ, ಶಶೀಂದ್ರ, ನಶ್ರಾ ಸುಲ್ತಾನ್, ಮಕ್ಕಳು ಪಾಲ್ಗೊಂಡಿದ್ದರು.