Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಾಲ್ಮೀಕಿ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಅ.20 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ವಾಲ್ಮೀಕಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀಧರ್, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಕೆ.ವಿ.ಗವಿರಾಯಪ್ಪ, ಖಜಾಂಚಿ ಕೆ.ಎನ್.ಆವಲಕೊಂಡರಾಯಪ್ಪ, ಸಂಘಟನಾ ಕಾರ್ಯದರ್ಶಿ ಮುನಿವೆಂಟಕಸ್ವಾಮಿ, ಸದಸ್ಯರಾದ ನರಸಿಂಹರಾಜು, ಸಮುದಾಯದ ಮುಖಂಡರಾದ ಶ್ರೀನಿವಾಸ್, ಕೆ.ಟಿ.ನಾರಾಯಣಸ್ವಾಮಿ, ಪಿ.ಮುನಿರಾಜು, ಮುನಿಕೃಷ್ಣ, ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಜಿ.ಮೂರ್ತಿ, ಉಪಾಧ್ಯಕ್ಷ ನಾರಾಯಣಸ್ವಾಮಿ ಸಭೆಯಲ್ಲಿ ಭಾಗಭಹಿಸಿದ್ದರು.