Home News Chikkaballapur ಜಿಲ್ಲೆಯಾದ್ಯಂತ ವನಮಹೋತ್ಸವಕ್ಕೆ ಚಾಲನೆ

ಜಿಲ್ಲೆಯಾದ್ಯಂತ ವನಮಹೋತ್ಸವಕ್ಕೆ ಚಾಲನೆ

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ವನಮಹೋತ್ಸವ (Vanamahotsava) ಕಾರ್ಯಕ್ರಮಕ್ಕೆ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಲಾಗಿದೆ.

ಚಿಂತಾಮಣಿ

ಚಿಂತಾಮಣಿ ನಗರದ ಕನಂಪಲ್ಲಿಗೆ ಹೊಂದಿಕೊಂಡಿರುವ ಕಾಡುಮಲ್ಲೇಶ್ವರ ಬೆಟ್ಟದ ತಪ್ಪಲಿನಲ್ಲಿ ರಾಜ್ಯದ ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಾಗೇಪಲ್ಲಿ

Vanamahotsava Bagepalli

ಬಾಗೇಪಲ್ಲಿ ತಾಲ್ಲೂಕಿನ ಮಿಟ್ಟೇಮರಿ ಗ್ರಾಮದ ಬಳಿವಿರುವ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚಾಲನೆ ನೀಡಿದರು.

ಶಿಡ್ಲಘಟ್ಟ

ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಎಫ್‌ಇಎಸ್‌ ಸಂಸ್ಥೆಯ ಸಹಯೋಗದಲ್ಲಿ ವೆಂಕಟಕೃಷ್ಣಮ್ಮನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಗಿಡ ನೆಡುವುದರ ಮೂಲಕ ಚಾಲನೆ ನೀಡಲಾಯಿತು.

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ನಗರ ಹೊರವಲಯದ ಕೆ.ವಿ. ಆಂಗ್ಲ ಶಾಲೆಯಲ್ಲಿ ಶನಿವಾರ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version