Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ವಿಶ್ವ ಗ್ರಾಹಕರ ದಿನಾಚರಣೆ (World Consumers Rights Day) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha) ” ಪ್ರಸ್ತುತ ಒಂದಲ್ಲ ಒಂದು ರೀತಿ ಎಲ್ಲರೂ ಗ್ರಾಹಕರಾಗಿದ್ದಾರೆ. ಪ್ರತಿಯೊಬ್ಬರು ಗ್ರಾಹಕರ ಹಕ್ಕು ಹಾಗೂ ಕಾನೂನುಗಳನ್ನು ಅರಿಯಬೇಕು. ಗುಣಮಟ್ಟದ ವಸ್ತುಗಳನ್ನು ನೀಡಿ ಅಂಗಡಿ ಮಾಲೀಕರು ಗ್ರಾಹಕರ ನಂಬಿಕೆಯನ್ನುಗಳಿಸಬೇಕು. ನ್ಯಾಯಬೆಲೆ ಅಂಗಡಿಯವರು ವಸ್ತುಗಳ ತೂಕ ಮತ್ತು ಅಳತೆಯನ್ನು ನ್ಯಾಯುತವಾಗಿ ಮಾಡಬೇಕು. ಸಾಕಷ್ಟು ಗ್ರಾಹಕರು ಆನ್‌ಲೈನ್‌ನಲ್ಲಿ ಆಹಾರ, ಬಟ್ಟೆ ಮತ್ತಿತರ ವಸ್ತುಗಳನ್ನು ಖರೀದಿಸುವರು. ಆದರೆ ಖರೀದಿಸುವ ವಸ್ತುಗಳ ಗುಣಮಟ್ಟ, ಸುರಕ್ಷೆ ಹಾಗೂ ಉತ್ಪಾದನೆ ಕುರಿತು ಅರಿವಿರಬೇಕು. ವಂಚಿತರಾದಲ್ಲಿ ಕೂಡಲೇ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ನೀಡಿ ಪರಿಹಾರ ಪಡೆದುಕೊಳ್ಳಬೇಕು” ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಕಾಂತ್ ಜೆ. ಮಿಸ್ಕಿನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್.ಕಬಾಡೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕಿ ಪಿ.ಸವಿತಾ, ಕಾನೂನು ಮಾಪನ ಇಲಾಖೆ ಸಹಾಯಕ ನಿಯಂತ್ರಕಿ ಮಾಲಾ ಕಿರಣ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್, ನ್ಯಾಯಬೆಲೆ ಅಂಗಡಿ ಮಾಲೀಕರು, ಗ್ರಾಹಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.