ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ’ (World Suicide Prevention Day) ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ “ಜೀವನದಲ್ಲಿ ಸೋಲು-ಗೆಲುವು ಸಾಮಾನ್ಯ. ನಮ್ಮ ಜೀವನ ಹೀಗೆ ಇರಬೇಕು ಎಂದು ಭಾವಿಸುವುದು ತಪ್ಪಲ್ಲ. ಅದರಂತೆ ಆಗದಿದ್ದರೆ ಖಿನ್ನತೆಗೆ ಒಳಗಾಗುವುದು ಸರಿಯಲ್ಲ. ಜೀವನದಲ್ಲಿ ಏನೇ ಬಂದರೂ ಎದುರಿಸುವುದನ್ನು ಕಲಿಯಬೇಕು. ವೈಫಲ್ಯಗಳು ಸಹಜ. ಆದರೆ ಅರ್ಥ ಮಾಡಿಕೊಂಡು ಮುಂದಿನ ಬದುಕಿಗೆ ಸನ್ನದ್ಧರಾಗಿ ನಡೆಯಬೇಕು. ವ್ಯಾಯಾಮ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ” ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ಕೆ.ಮಂಜುಳಾ ದೇವಿ , ಮನೋವೈದ್ಯರಾದ ಡಾ.ಎ. ಲಾವಣ್ಯ, ಡಾ.ಜಿ. ಹೇಮಂತ್ ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಿ.ಡಿ.ಚಂದ್ರಯ್ಯ, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಅಭಿಲಾಷ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!