17.5 C
Bengaluru
Friday, November 22, 2024

ಚಿಕ್ಕಬಳ್ಳಾಪುರ ಉತ್ಸವಕ್ಕೆ ಚಾಲನೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆಯಿತ್ತಿರುವ ಚಿಕ್ಕಬಳ್ಳಾಪುರ ಉತ್ಸವಕ್ಕೆ (Chikkaballapura Utsava) ಅದ್ದೂರಿ ನಗರದ ಸರ್‌ ಎಂ. ವಿಶ್ವೇಶ್ವರಯ್ಯ (Sir M. Visvesvaraya) ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಅದ್ದೂರಿ ಚಾಲನೆ ದೊರೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) “ಗುಣಮಟ್ಟದ ಹಣ್ಣು, ತರಕಾರಿ, ರೇಷ್ಮೆ, ಹಾಲನ್ನು ಉತ್ಪಾದಿಸುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಶ್ರಮಜೀವಿಗಳು. ‘ಭಾರತ ರತ್ನ’ಕ್ಕೆ ಭಾಜನರಾಗಿರುವ ಸರ್‌.ಎಂ. ವಿಶ್ವೇಶ್ವರಯ್ಯ ಮತ್ತು ಸಿ‌ಎನ್‌ಆರ್ ರಾವ್ ಇಬ್ಬರು ಚಿಕ್ಕಬಳ್ಳಾಪುರ ಜಿಲ್ಲೆಯವರು. ಧಾರ್ಮಿಕ, ಪ್ರವಾಸೋದ್ಯಮ, ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವ ಚಿಕ್ಕಬಳ್ಳಾಪುರಕ್ಕೆ ‘ಫಲಪುಷ್ಪಗಳ ಗಿರಿಧಾಮಗಳ ನಾಡು’ ಎನ್ನುವ ಹೆಸರು ಅನಾವರಣಗೊಳಿಸಲಾಗಿದ್ದು ಪ್ರವಾಸೋದ್ಯಮ ಇಲಾಖೆಯಿಂದ ಇದನ್ನು ಅಧಿಕೃತಗೊಳಿಸುತ್ತೇವೆ” ಎಂದು ಹೇಳಿದರು.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ನಟ ಕಿಚ್ಚ ಸುದೀಪ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮಾತನಾಡಿದರು. ಜಿಲ್ಲಾಧಿಕಾರಿ ಎನ್‌.ಎಂ. ನಾಗರಾಜ್, ಜಿ.ಪಂ ಸಿಇಒ ಪಿ. ಶಿವಶಂಕರ್, ಎಸ್‌ಪಿ ಡಿ.ಎಲ್. ನಾಗೇಶ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್, ಬಿಎಂಟಿಸಿ ಉಪಾಧ್ಯಕ್ಷ ಕೆ.ವಿ. ನವೀನ್ ಕಿರಣ್, ನಗರಸಭೆ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ ಬಾಬು, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಕೃಷ್ಣಮೂರ್ತಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಜಿ.ಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!