Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸೋಮವಾರ ನಡೆದ SSLC ಪರೀಕ್ಷೆ (Examination) ಗೆ ಒಟ್ಟು 15,821 ಮಂದಿ ನೋಂದಾಯಿಸಿಕೊಂಡಿದ್ದರು. ಇವರಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯಲು 15,655 ವಿದ್ಯಾರ್ಥಿಗಳು ಹಾಜರಾಗಿದ್ದು 158 ವಿದ್ಯಾರ್ಥಿಗಳು ಗೈರಾಗಿದ್ದರು. ಕಳೆದ ವರ್ಷ ಅನುತ್ತೀರ್ಣರಾಗಿದ್ದ ಎಂಟು ಮಂದಿಯಲ್ಲಿ ಒಬ್ಬರು ಗೈರಾಗಿದ್ದರು. 1,263 ಮಂದಿ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು 1,121 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಸೇರಿದಂತೆ ಒಟ್ಟು 302 ಪ್ರೌಢಶಾಲೆಗಳಿದ್ದು 75 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.