Chikkballapur : Covid-19 ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಸೋಮವಾರ ನಗರಸಭೆ (City Municipal Council) ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು.
ಸಭೆಯಲ್ಲಿ ಮಾತಾನಾಡಿದ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು “Omicron ಸೋಂಕು ಚಿಕ್ಕಬಳ್ಳಾಪುರ ನಗರಕ್ಕೆ ಇಲ್ಲಿಯವರೆಗೂ ಪ್ರವೇಶಿಸಿಲ್ಲ. ಸಮರೋಪಾದಿಯಲ್ಲಿ ಸೋಂಕು ತಡೆಗೆ ಲಸಿಕೆ ಹಾಕಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕಾಗಿದೆ. ನಗರದ ಜನನಿಬಿಡ ಪ್ರದೇಶಗಳಾದ APMC, Bus Stand ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಯನ್ನು ತಡೆಯಲು ಮಾರ್ಷಲ್‌ಗಳನ್ನು ನೇಮಿಸಲಾಗಿದೆ. 15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಪೋಷಕರು ತಪ್ಪದೆ ಲಸಿಕೆ ಹಾಕಿಸಬೇಕು” ಎಂದು ಹೇಳಿದರು.
ಪೌರಾಯುಕ್ತ ಮಹಾಂತೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ನಗರಸಭೆಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.