Bagepalli : ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ತಾಲ್ಲೂಕು ವಕೀಲರ ಸಂಘ ಹಾಗೂ ಬೆಂಗಳೂರಿನ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಸಹಭಾಗಿತ್ವದಲ್ಲಿ ಶುಕ್ರವಾರ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಬಾಲ್ಯ ವಿವಾಹ ನಿಷೇಧ ಕಾರ್ಯಾಗಾರ (Child Marriage Prohibition Workshop) ನಡೆಸಲಾಯಿತು.
ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ರಂಗಸ್ವಾಮಿ ” ಈ ತಾಲ್ಲೂಕಿನಲ್ಲಿ ಅತಿ ಹೆಚ್ಚು ಬಾಲ್ಯವಿವಾಹಗಳು ಆಗುತ್ತಿರುವುದು ಆತಂಕಕಾರಿ. ಹಾಗಾಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರತಿಯೊಬ್ಬ ಶಿಕ್ಷಕರಿಗೂ ತಿಳಿದಿರುತ್ತದೆ. ಶಾಲೆಗೆ ಗೈರಾದ ವಿದ್ಯಾರ್ಥಿನಿಯರ ಪೋಷಕರ ಜೊತೆ ಶಿಕ್ಷಕರು ಸಮಾಲೋಚಿಸಿ, ವಿದ್ಯಾರ್ಥಿನಿಯರ ಚಲನವಲನಗಳ ಬಗ್ಗೆ ನಿಗಾ ವಹಿಸಬೇಕು. ತಾಲ್ಲೂಕು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಿಷೇಧ ಅಧಿಕಾರಿಗಳ ತಂಡವನ್ನು ನೇಮಿಸಲಾಗಿದ್ದು ಬಾಲ್ಯವಿವಾಹ ಬಗ್ಗೆ ಕೆಲವರಿಗೆ ತಿಳಿದರೂ, ಕೆಲ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ಕಾನೂನಿನ ಉಲ್ಲಂಘನೆ. ಹಾಗಾಗಿ ನಿರ್ಲಕ್ಷ್ಯ ಬೇಡ. ಗ್ರಾಮಗಳಲ್ಲಿ ಬಾಲ್ಯವಿವಾಹದಿಂದಾಗುವ ತೊಂದರೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಿ, ಬಾಲ್ಯ ವಿವಾಹಗಳನ್ನು ತಡೆಯಬೇಕು” ಎಂದು ತಿಳಿಸಿದರು.
ಹಿರಿಯ ವಕೀಲ ಎ.ಜಿ.ಸುಧಾಕರ್, ಸಿ.ಎನ್.ಚಿನ್ನಸ್ವಾಮಿ, ಪ್ರಶಾಂತ್ ಕೆ ಪಾಲೀಲ್, ಜಿ.ವಿ.ರಮೇಶ್, ಎ.ನಂಜುಂಡಪ್ಪ, ಮಂಜುನಾಥ್, ಆರ್.ವೆಂಕಟರಾಮಪ್ಪ, ಕೆ.ವಿ.ರಾಮಚಂದ್ರ, ರಾಮಾಂಜಿ, ಎ.ಗೌರಿ, ಅಯ್ಯಪ್ಪ, ಭಾರತಿ, ಸಾತ್ವಿಕ್ ಸೇರಿದಂತೆ ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
[…] post ಬಾಲ್ಯ ವಿವಾಹ ನಿಷೇಧ ಕಾರ್ಯಾಗಾರ appeared first on […]