Home Chikkaballapur ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಮಕ್ಕಳ ದಿನಾಚರಣೆ

ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಮಕ್ಕಳ ದಿನಾಚರಣೆ

0
Children's Day Celebration Chikkabalapur

Chikkaballapur : ಭಾನುವಾರ ಜಿಲ್ಲಾಡಳಿತದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಶಿವಲಿಂಗ ನಾಯಿಕ ಮಾತನಾಡಿ ” ಜನರಲ್ಲಿ ಪೊಸ್ಕೊ ಕಾಯ್ದೆ, ಗ್ರಾಹಕರ ಹಕ್ಕು, ಮಕ್ಕಳ ಹಕ್ಕು, ಹಿರಿಯ ನಾಗರಿಕರ ಹಕ್ಕು, ಅಂಗವಿಕಲರ ಕಾನೂನು ಹಕ್ಕು, ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ, ಲೈಂಗಿಕ ಕಿರುಕುಳ ಸುರಕ್ಷತಾ ಕಾಯ್ದೆ, ಮೋಟಾರ್ ವಾಹನ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲು 5 ದಿನಗಳಲ್ಲಿ ಸುಮಾರು ೨೦೦ ಕ್ಕೂ ಹೆಚ್ಚು ಕಾನೂನಿನ ಅರಿವು ನೆರವು ಕಾರ್ಯಕ್ರಮಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಮಾಡಲಾಯಿತು ” ಎಂದು ತಿಳಿಸಿದರು.

ಕಳೆದ ಒಂದುವರೆ ವರ್ಷದಿಂದ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೂ ತೆರಳಿ ಸಾರ್ವಜನಿಕರ ಆರೋಗ್ಯ ವಿಚಾರಿಸಿ, ಕೋವಿಡ್ ಲಸಿಕೆ ಹಾಕಿಸುವಲ್ಲಿ ಬಹು ಮುಖ್ಯ ಪಾತ್ರವಹಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಶ್ಲಾಘಿಸಿದರು

ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದರಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಮತ್ತು ಬಹುಮಾನವನ್ನು ವಿತರಿಸಲಾಯಿತು. 2021-22ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಜಿಲ್ಲಾಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಎಂಟು ಜನ ಮಕ್ಕಳನ್ನು ಸನ್ಮಾನಿಸಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಅಭಿನಂದನಾ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.

ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಸನತ್ ಸಿ.ವಿ, ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಧೀಶರಾದ ವಿವೇಕಾನಂದ್ ಎಸ್.ಪಂಡಿತ್, ಹೆಚ್ಚುವರಿ ಜಿಲ್ಲಾ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶರಾದ ಭಾನುಮತಿ ಬಿ.ಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್.ಕಬಾಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಶ್ವತಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮದ್ ಉಸ್ಮಾನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version