Chintamani : ಚಿಂತಾಮಣಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಭಾನುವಾರ ನಿಜಶರಣರ ಅಂಬಿಗರ ಚೌಡಯ್ಯ (ambigar chowdayya jayanthi) ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಸುದರ್ಶನ ಯಾದವ್ ” ಅಂಬಿಗರ ಚೌಡಯ್ಯರ ವಚನಗಳು ಆಚಾರ-ವಿಚಾರ, ತತ್ವಾದರ್ಶಗಳು ಸಂಸ್ಕೃತಿಯನ್ನು ಬಿಂಬಿಸುತ್ತವೆ. ಸಮಾಜದ ಅವ್ಯವಸ್ಥೆಯ ವಿರುದ್ಧ ತಮ್ಮ ವಚನ ಸಾಹಿತ್ಯದ ಮೂಲಕ ಹೋರಾಟ ನಡೆಸಿ ಸಮಾಜದಲ್ಲಿನ ವಿವಿಧ ಪಿಡುಗುಗಳನ್ನು ದೂರ ಮಾಡಿ ಸಮಸಮಾಜದ ನಿರ್ಮಾಣಕ್ಕಾಗಿ ಹಗಲಿರುಳು ದುಡಿದಿರುವ ಮಹಾನ್ ಸಂತ. 12ನೇ ಶತಮಾನದ ಅನುಭವ ಮಂಟಪದಲ್ಲಿ ಮೊದಲ ಪಂಕ್ತಿಯಲ್ಲಿ ಇದ್ದ ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವಂತಾಗಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಎನ್.ನಾಗಿರೆಡ್ಡಿ, ಮುರಳಿ, ಆರ್.ಚಂದ್ರಶೇಖರ್, ಆರ್.ಜಗನ್ನಾಥ್, ಆರ್.ಮಂಜುನಾಥ್, ಶಿವಯ್ಯ, ಅಂಜಿನಪ್ಪ ಪಾಲ್ಗೊಂಡಿದ್ದರು.