Chintamani : ಚಿಂತಾಮಣಿ ತಾಲ್ಲೂಕಿನ ಕೈವಾರ ಹೋಬಳಿ ಅಟ್ಟೂರು (Attur) ಗ್ರಾಮದ ಇತಿಹಾಸ ಪ್ರಸಿದ್ದ ಲಕ್ಷ್ಮೀನರಸಿಂಹ ಕಲ್ಯಾಣ ಬ್ರಹ್ಮರಥೋತ್ಸವ (Lakshmi Narasimha Rathotsava) ಮಂಗಳವಾರ ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮ, ಸಡಗರದಿಂದ ಶ್ರದ್ಧಾಭಕ್ತಿಯಿಂದ ನಡೆಯಿತು.
ರಥೋತ್ಸವದ ಹಿನ್ನಲೆಯಲ್ಲಿ ದೇವಾಲಯದ ಒಳಗೆ ಹಾಗೂ ಆವರಣದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಲಕ್ಷ್ಮಿನರಸಿಂಹ ದೇವರಿಗೆ ವಿಶೇಷ ಹೂವಿನ ಅಲಂಕಾರ, ಅಭಿಷೇಕ, ಹೋಮ, ಹವನ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತ ಹಾಗೂ ಸಂಪ್ರದಾಯದಂತೆ ನಡೆಸಿ ಅರ್ಚಕರು ಉತ್ಸವಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಕರೆತಂದು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿದರು. ರಥದಲ್ಲಿ ಮತ್ತೊಮ್ಮೆ ಅಲಂಕಾರ ಮೂಜೆ ನೆರವೇರಿಸಿದರು. ಮಧ್ಯಾಹ್ನ 1.30ಕ್ಕೆಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ದೇವಾಲಯದ ಟ್ರಸ್ಟಿಗಳು ಲಕ್ಷಿನರಸಿಂಹ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬ್ರಹ್ಮರಥೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ನೆರೆದಿದ್ದ ಸಾವಿರಾರು ಭಕ್ತರು ರಥವನ್ನು ಎಳೆದು ಭಕ್ತಿಯಲ್ಲಿ ಸಂಭ್ರಮಿಸಿದರು. ಬಾಳೆಹಣ್ಣು, ದವನ ಎಸೆದು ಭಕ್ತಿಯ ಹರಕೆ ತೀರಿಸಿದರು.