26.6 C
Bengaluru
Saturday, January 25, 2025

ಆನ್‌ಲೈನ್‌ ಶಿಕ್ಷಣದಿಂದ ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ

- Advertisement -
- Advertisement -

Chintamani : ಚಿಂತಾಮಣಿ ತಾಲ್ಲೂಕಿನ ಬುರುಡಗುಂಟೆ ಕ್ಲಸ್ಟರ್ ತುಳವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈಚೆಗೆ ಭೇಟಿ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ.ಸುರೇಶ್ ಮಾತನಾಡಿದರು.

ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಕಲಿಕೆಯಿಂದ ಮಕ್ಕಳು ವಂಚಿತರಾಗಿದ್ದಾರೆ. ಆನ್‌ಲೈನ್‌ ಶಿಕ್ಷಣದಿಂದ ಮಕ್ಕಳ ಕಲಿಕೆಯ ಜೊತೆಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆನ್‌ಲೈನ್‌ ಶಿಕ್ಷಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುವ ಆತಂಕ ಎದುರಾಗಿದೆ. ಪೋಷಕರು, ಮಕ್ಕಳ ಅಭಿಪ್ರಾಯದಂತೆ ಶಾಲೆ ತೆರೆಯಲಾಗಿದೆ. ಮಕ್ಕಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೋವಿಡ್ -19ರ 3ನೇ ಅಲೆಯ ಸಾಧ್ಯತೆಯಿಂದಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ 9 ಮತ್ತು 10ನೇ ತರಗತಿ ಆರಂಭಗೊಂಡಿದ್ದರೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ಒಂದರಿಂದ ಐದನೇ ತರಗತಿಯ ಮಕ್ಕಳಿಗೂ ತರಗತಿ ಆರಂಭಿಸುವ ಚಿಂತನೆ ನಡೆಯುತ್ತಿದ್ದು, ಮಕ್ಕಳು, ಪೋಷಕರು ಹಾಗೂ ಶಿಕ್ಷಕರು ಕಡ್ಡಾಯವಾಗಿ ಕೋವಿಡ್‌ ಮಾರ್ಗಸೂಚಿ ಪಾಲಿಸಬೇಕು. ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

‘ಮಿಂಚಿನ ಸಂಚಾರ’ ತಂಡದ ಇಸಿಒ ಮುರಳಿಕೃಷ್ಣ, ಸಿ.ಆರ್.ಪಿ ಅಲ್ತಾಪ್, ರಮೇಶ್, ಮಂಜುನಾಥ, ಶಂಕರ್, ಶಾಲಾ ಮುಖ್ಯಶಿಕ್ಷಕ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪ, ಶಿಕ್ಷಕ ಸಿ.ವೆಂಕಟರಮಣ, ವಿ.ಆಂಜನೇಯ, ಸ್ವಯಂ ಸೇವಾ ಶಿಕ್ಷಕ ಸಿ.ರಮೇಶ ಉಪಸ್ಥಿತರಿದ್ದರು.

- Advertisement -
Latest news
- Advertisement -
Related news
- Advertisement -
error: Content is protected !!