Chintamani : ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಂಗಿಮಾಳು ಗ್ರಾಮದಲ್ಲಿ ಶನಿವಾರ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ (water Tank Drowing) ಬಿದ್ದು ಮೃತಪಟ್ಟಿದ್ದಾರೆ.
ಮೃತರನ್ನು ವಂಗಿಮಾಳು ಗ್ರಾಮದ ನಿವಾಸಿ ಶಂಕರರೆಡ್ಡಿ (38) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಬಾಗೇಪಲ್ಲಿಯ ನ್ಯಾಷನಲ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಅವರ ವಿವಾಹದ ದಿನಾಂಕ ನಿಶ್ಚಯವಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದರು
ಬಟ್ಲಹಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು ಶನಿವಾರ ಸಂಜೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.