Home News Chintamani ಬೈಕ್‌, ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಬೈಕ್‌, ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

0
Bike Car Accident

Chintamani : ಚಿಂತಾಮಣಿ ತಾಲ್ಲೂಕಿನ ಕುರುಟಹಳ್ಳಿ ಕ್ರಾಸ್‌ನಲ್ಲಿ ಭಾನುವಾರ ಬೈಕ್‌ಗೆ ಕಾರು ಡಿಕ್ಕಿ (Bike Car Accident) ಹೊಡೆದು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕೋಲಾರ ತಾಲ್ಲೂಕಿನ ಆಲೇರಿ ಗ್ರಾಮದ ಮೊಹ್ಮದ್ ರಫೀ ಮತ್ತು ಅವರ ಪತ್ನಿ ಹಜೀಮಾ ಬೈಕ್‌ನಲ್ಲಿ ದಿಬ್ಬೂರಹಳ್ಳಿ ಗ್ರಾಮದಲ್ಲಿ ಸಂಬಂಧಿಕರೊಬ್ಬರ ಮನೆಗೆ ನಾಮಕರಣಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಸಂಜೆ ತಮ್ಮ ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಕುರುಟಹಳ್ಳಿ ಕ್ರಾಸ್‌ನಲ್ಲಿ ಬೆಂಗಳೂರು ಕಡೆಯಿಂದ ಮದನಪಲ್ಲಿ ಕಡೆಗೆ ಹೋಗುತ್ತಿದ್ದ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಬೈಕ್ ಚಾಲನೆ ಮಾಡುತ್ತಿದ್ದ ಮೊಹ್ಮದ್ ರಫೀ ಮುಖ, ತಲೆ ಕೈಕಾಲುಗಳಿಗೆ ಹಾಗೂ ಪತ್ನಿ ಹಜೀಮಾ ಅವರ ಬಲಕಾಲಿನ ಮೂಳೆ ಮುರಿದಿದ್ದು ಸಾರ್ವಜನಿಕರು ಕೂಡಲೇ ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಕಳುಹಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version