Chintamani : ಮನೆಯ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ Car ಹರಿದು ಬಾಲಕ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ (Accident) ಬುಧವಾರ ಚಿಂತಾಮಣಿ ನಗರದ 4ನೇ ವಾರ್ಡ್ ನ ಟ್ಯಾಂಕ್ ಬಂಡ್ ರಸ್ತೆಯಲ್ಲಿ ನಡೆದಿದೆ. ರಸ್ತೆಯ ನಿವಾಸಿ ವೆಂಕಟೇಶ್ವರಲು ಮತ್ತು ಮೋನಿಶಾ ದಂಪತಿಗಳ ಮಗ ಗೀತಕ್ (4) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಚಾಲಕ ಕಾರನ್ನು ಪಾರ್ಕ್ ಮಾಡುತ್ತಿದ್ದಾಗ ಮನೆಯ ಮುಂದೆ ಆಟವಾಡುತ್ತಿತ್ತು ಬಾಲಕನ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡೆಕ್ಕನ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ನೀಡಿದರಾದರೂ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.
ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur