Chintamani : ಚಿಂತಾಮಣಿ ನಗರದ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ (CDC Meeting) ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ “ಕೇಂದ್ರ ಸರ್ಕಾರದ ನಿವೃತ್ತ ಐಎಎಸ್ ಅಧಿಕಾರಿಗಳು ಸ್ಥಾಪಿಸಿರುವ ಕ್ರಿಸ್ಥ್ ಸಂಸ್ಥೆಯ ಮೂಲಕ ದೇಶದಲ್ಲೇ ಪ್ರಥಮವಾಗಿ ರಾಜ್ಯದ ಪದವಿ ಕಾಲೇಜುಗಳಲ್ಲಿ ಉದ್ಯೋಗಾಧಾರಿತ ಕೋರ್ಸ್‌ಗಳನ್ನು ತೆರೆದು, ಉನ್ನತ ಶಿಕ್ಷಣದಲ್ಲಿ ಕ್ರಾಂತಿಕಾರಿಕ ಬದಲಾವಣೆ ಯನ್ನು ಮಾಡಲಾಗುತ್ತಿದೆ. ತರಬೇತಿ ಅವಧಿಯಲ್ಲಿ ₹ 11ರಿಂದ ₹ 17 ಸಾವಿರದವರೆಗೆ ಸ್ಟೈಫಂಡ್ ನೀಡಲಾಗುತ್ತದೆ. ತರಬೇತಿ ಪಡೆದವರಿಗೆ ಶೇ 100ಕ್ಕೆ 100ರಷ್ಟು ಉದ್ಯೋಗ ಲಭಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ನಿವೃತ್ತ ಕಾರ್ಯದರ್ಶಿಗಳು ರೂಪಿಸಿರುವ ಈ ಯೋಜನೆಯನ್ನು ಪ್ರಥಮವಾಗಿ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ” ಎಂದು ಹೇಳಿದರು.
ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಂಶುಪಾಲರು ಭಾಗವಹಿಸಿದ್ದರು.