Chintamani : ಚಿಂತಾಮಣಿ ನಗರದ ಮಾಳಪ್ಪಲ್ಲಿಯಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ, ₹4 ಲಕ್ಷ ಮೌಲ್ಯದ ಮೂರು ಚಿನ್ನದ ಸರಗಳನ್ನು ಕಳ್ಳರು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.
ಮಾಳಪ್ಪಲ್ಲಿಯ ನಿವಾಸಿ ನೀಲಮ್ಮ ಅವರು ಪತಿ ಶ್ರೀರಾಮಯ್ಯನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಎದುರುಗಡೆಯಿಂದ ದ್ವಿಚಕ್ರವಾಹನದಲ್ಲಿ ಬಂದ ಕಳ್ಳರು ಅವರು ಧರಿಸಿದ್ದ 30 ಗ್ರಾಂ ತೂಕದ ಮಾಂಗಲ್ಯ ಸರ, 20 ಗ್ರಾಂ ತೂಕದ ಚಿನ್ನದ ಚೈನ್ ಮತ್ತು 30 ಗ್ರಾಂ ತೂಕದ ಟೀಕಾ ಚೈನ್‌ಗಳನ್ನು ಕಿತ್ತುಕೊಂಡು ಪರಾರಿಯಾದರು.
ಕಳ್ಳತನದ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ತಕ್ಷಣವೇ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಘಟನೆ ನಗರದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದ್ದು, ನಾಗರಿಕರಿಗೆ ಎಚ್ಚರಿಕೆ ವಹಿಸಲು ಪೊಲೀಸರು ಮನವಿ ಮಾಡಿದ್ದಾರೆ.