- Advertisement -
- Advertisement -
- Advertisement -
- Advertisement -
Chintamani : ಚಿಂತಾಮಣಿ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ನಗರಸಭೆ ಆಶ್ರಯದಲ್ಲಿ ಶನಿವಾರ ನಗರಸಭೆ ಸಭಾಂಗಣದಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ (CMC Health Camp) ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಜಿ.ಎನ್.ಚಲಪತಿ “ಪ್ರತಿ 3 ತಿಂಗಳಿಗೊಮ್ಮೆ ಪೌರಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗೂ ಆರೋಗ್ಯ ತಪಾಸಣೆ ಮಾಡುತ್ತೇವೆ. ಕಳೆದ ವರ್ಷದ ತಪಾಸಣೆಯಲ್ಲಿ ಒಬ್ಬ ಪೌರಕಾರ್ಮಿಕರಿಗೆ ಹೃದ್ರೋಗ ಸಮಸ್ಯೆ ಇತ್ತು. ಆ ವ್ಯಕ್ತಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಿದ್ದರಿಂದ ಗುಣಮುಖರಾಗಿ ಕೆಲಸಕ್ಕೆ ಮರಳಿದ್ದಾರೆ. ಒಳಚರಂಡಿ ಸ್ವಚ್ಛಗೊಳಿಸಲು ಸಿಬ್ಬಂದಿ ಶ್ರಮಿಸುತ್ತಿದ್ದಾರೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳು ಮತ್ತು ನಗರಸಭೆ ಸಿಬ್ಬಂಧಿ ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
- Advertisement -