Chintamani : ಕೇಂದ್ರ ಸರ್ಕಾರ Gas, Petrol, Diesel ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುವಂತೆ KPCC ಕರೆ ನೀಡಿದ್ದ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಶ್ರೀರಾಮನಗರದಲ್ಲಿ ಗ್ಯಾಸ್ ಸಿಲೆಂಡರ್‌ಗಳಿಗೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ, ಜಾಗಟೆ ಬಾರಿಸುವ ಮೂಲಕ Congress ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ (Protest) ಮಾಡಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಕೋನಪ್ಪಲ್ಲಿ ಕೋದಂಡ , ‘ಅಂತರರಾಷ್ಟ್ರೀಯ ಮಟ್ಟದ ಬೆಲೆ ಏರಿಳಿತಕ್ಕೆ ಅನುಗುಣವಾಗಿ ಬೆಲೆ ನಿರ್ಧಾರ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸಬೂಬು ಹೇಳುತ್ತದೆ. ಕೇಂದ್ರ ಸರ್ಕಾರ ತೆರಿಗೆಯನ್ನು ಕಡಿಮೆ ಮಾಡುವುದರ ಮೂಲಕ ಬೆಲೆ ಏರಿಕೆಯನ್ನು ತಡೆಗಟ್ಟಬೇಕು. ’ ಎಂದರು.
ಕಾರ್ಮಿಕ ವಿಭಾಗದ ತಾಲ್ಲೂಕು ಘಟಕದ ಅಧ್ಯಕ್ಷ ತಳಗವಾರ ಮುನಿರಾಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.