Chintamani : ಚಿಂತಾಮಣಿ ನಗರದ ತಾ.ಪಂ ಕಚೇರಿ ಆವರಣದಲ್ಲಿ ಬುಧವಾರ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಆಯೋಜಿಸಿದ್ದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ (Prime Minister’s Employment Generation Programme) ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ್ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ್ “ಪ್ರತಿಯೊಬ್ಬರಿಗೂ ಸರ್ಕಾರಿ ಉದ್ಯೋಗ ದೊರೆಯುವುದಿಲ್ಲ. ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ಹಲವು ಯೋಜನೆ ರೂಪಿಸಿದ್ದು ಅದರಂತೆ ರಾಷ್ಟಿಕೃತ, ಗ್ರಾಮೀಣ, ಎಸ್‌ಎಲ್‌ಬಿಸಿಯಿಂದ ಅನುಮೋದಿಸಲ್ಪಟ್ಟ ಖಾಸಗಿ ವಾಣಿಜ್ಯ ಬ್ಯಾಂಕ್‌ಗಳು, ಸಹಕಾರಿ ಬ್ಯಾಂಕ್‌ಗಳಿಂದ ಸಾಲ ನೀಡಲಾಗುವುದು. ಸ್ವಯಂ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ಜೀವನ ನಡೆಸಬೇಕು ಎಂಬುವುದು ಸರ್ಕಾರದ ಧ್ಯೇಯ. ಇಲಾಖೆಯಿಂದ ಬರುವ ಸಬ್ಸಿಡಿ ಮತ್ತು ಬ್ಯಾಂಕ್‌ನಿಂದ ದೊರೆಯುವ ಸಾಲ ಎರಡು ಉಪಯೋಗಿಸಿಕೊಂಡು ಸ್ವಾವಲಂಬಿಯಾಗಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆವಿಐಸಿ ಸಹಾಯಕ ನಿರ್ದೇಶಕ ಗೋಪಾಲಕೃಷ್ಣ, ಜಿಲ್ಲಾ ಕೈಗಾರಿಕಾ ಕೇಂದ್ರದ ಡಿ.ಡಿ ಶ್ರೀನಿವಾಸ ರೆಡ್ಡಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಅಧಿಕಾರಿ ಎ.ಬಿ.ರಾಜಶೇಖರ್, ತಾ.ಪಂ ವ್ಯವಸ್ಥಾಪಕ ರವಿ, ರಾಧಕೃಷ್ಣ, ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.