Chintamani : ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕತ್ತರಿಗುಪ್ಪೆ ಗ್ರಾಮದ ಬಳಿ ರೈತಸಂಘ ಮತ್ತು ಹಸಿರುಸೇನೆಯ ತಾಲ್ಲೂಕು ಘಟಕ ಬುಧವಾರ ರೈತರ ಕಾರ್ಯಾಗಾರ (Farmers Workshop) ಆಯೋಜಿಸಲಾಗಿತ್ತು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಾರ್ಯಾಗಾರದಲ್ಲಿ ಮಾತನಾಡಿ “ರಾಗಿ, ಜೋಳ, ಭತ್ತ ಸೇರಿದಂತೆ ಎಲ್ಲ ಉತ್ಪನ್ನಗಳ ಉತ್ಪಾದನಾ ವೆಚ್ಚಕ್ಕೆ, ಅದರ ಅರ್ಧದಷ್ಟು ನಷ್ಟವನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂಬುದೇ ಡಾ.ಸ್ವಾಮಿನಾಥನ್ ವರದಿ ಈ ವರದಿಯನ್ನು ಸರ್ಕಾರಗಳು ಮಾನದಂಡವನ್ನಾಗಿ ಪರಿಗಣಿಸಿ ಬೆಂಬಲ ಬೆಲೆ ನಿಗದಿ ಮಾಡುತ್ತಿಲ್ಲ. ಅನ್ನ, ಹಾಲು, ಹಣ್ಣು, ಮೊಟ್ಟೆ, ಮಾಂಸ ಕೊಡುವವರು ರೈತರು. ಕೃಷಿಯ ಮೇಲೆ ಎಲ್ಲರು ಅವಲಂಬಿತರಾಗಿದ್ದಾರೆ. ಎಲ್ಲ ಕ್ಷೇತ್ರಗಳು ಕೃಷಿಯ ಮೇಲೆ ನಿಂತಿವೆ. ಇತ್ತೀಚೆಗೆ ಕೃಷಿಯ ತಳ ಅಲುಗಾಡುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.
ಕಾರ್ಯಾಗಾರದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸೀಕಲ್ ರಮಣಾರೆಡ್ಡಿ, ರಾಜ್ಯ ಸಂಘದ ಕಾರ್ಯಾಧ್ಯಕ್ಷ ಮಂಜುನಾಥಗೌಡ, ಮಹಿಳಾ ಸಂಚಾಲಕಿ ಸಿ.ಉಮಾ, ತಾಲ್ಲೂಕು ಘಟಕದ ದಿದ್ದುನಾರಾಯಣಸ್ವಾಮಿ, ಎಂ.ಎಲ್.ಆಂಜನೇಯರೆಡ್ಡಿ, ಕೆ.ವಿ.ವೆಂಕಟಸ್ವಾಮಿರೆಡ್ಡಿ, ಪಾಲುನಾರಾಯಣಸ್ವಾಮಿ, ಆಂಜನೇಯರೆಡ್ಡಿ, ರೈತ ಮುಖಂಡರು ಭಾಗವಹಿಸಿದ್ದರು.