Chintamani: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ತಂದೆ ಅಥವಾ ತಾಯಿ ಕಟ್ಟಡ ಕಾರ್ಮಿಕರಾಗಿದ್ದು, ಮಂಡಳಿಯಲ್ಲಿ ಹೆಸರು ನೋಂದಾಯಿಸಿಕೊಂಡು, ನೋಂದಣಿ ಚಾಲ್ತಿಯಲ್ಲಿರಬೇಕು. ಅಭ್ಯರ್ಥಿಯು ಪದವಿಯನ್ನು ಪೂರ್ಣಗೊಳಿಸಿರಬೇಕು.
ನೋಂದಣಿಯಾಗಿರುವ ಕುರಿತು ದಾಖಲೆ (ಲೇಬರ್ ಕಾರ್ಡ್), ಪಾಸ್ ಪೋರ್ಟ್ ಅಳತೆ ಭಾವಚಿತ್ರದೊಂದಿಗೆ ಸೆ.30ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾಹಿತಿ: ಮುಖಪುಟ – ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ