Chintamani : ಚಿಂತಾಮಣಿ ನಗರದ ನಾರಸಿಂಹಪೇಟೆಯಲ್ಲಿನ ಗಂಗಾಭವಾನಿ ದೇವಿಯ ವಾರ್ಷಿಕೋತ್ಸವದ ಪ್ರಯುಕ್ತ ಗಂಗಾಭವಾನಿ ಅಮ್ಮನವರ ಗಂಗಜಾತ್ರೆ (Gangajatre) ವಿಜೃಂಭಣೆಯಿಂದ ನೆರೆವೇರಿತು.
ಜಾತ್ರೆಯ ಪ್ರಯುಕ್ತ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬೆಳಿಗ್ಗೆಯಿಂದಲೇ ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಚಿಂತಾಮಣಿ ನಗರದ ನಾರಸಿಂಹಪೇಟೆ, ಅಂಬೇಡ್ಕರ್ ಕಾಲೋನಿ (Ambedkar Colony), ಎನ್ಎನ್ಟಿ ರಸ್ತೆ, ಗಜಾನನ ವೃತ್ತ, ಟ್ಯಾಂಕ್ ಬಂಡ್ ರಸ್ತೆ, ವೆಂಕಟಗಿರಿಕೋಟೆ, ತಪತೇಶ್ವರ ಕಾಲೋನಿ, ವಿನಾಯಕ ನಗರ ಹಾಗೂ ಸುತ್ತಮುತ್ತಲಿನ ಮಹಿಳೆಯರು ಗಂಗಾಭವಾನಿ ಅಮ್ಮನವರಿಗೆ ವಿಶೇಷವಾಗಿ ತಯಾರಿಸಿದ್ದ ತಂಬಿಟ್ಟು ದೀಪಗಳನ್ನು ಹೊತ್ತು ಮೆರವಣಿಗೆ ಮೂಲಕ ಗಂಗಾಭವಾನಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.