Chintamani : ಚಿಂತಾಮಣಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜು (Government First Grade College) (GFGC) ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರ ಅಭಿವೃದ್ಧಿ ಸಮಿತಿ ಸಭೆ (Development Meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ “ಸುಮಾರು ₹70 ಕೋಟಿ ವೆಚ್ಚದಲ್ಲಿ ನೂತನ ಎಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಲಾಗಿದ್ದು ನೆಲ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಾದ ಸಿದ್ಧತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ಆರಂಭಿಸಲಾಗುವುದು. ಸದ್ಯಕ್ಕೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ತರಗತಿ ಪ್ರಾರಂಭಿಸಲಾಗುವುದು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸರ್ಕಾರಿ ಕಾಲೇಜುಗಳನ್ನು ಖಾಸಗಿ ಕಾಲೇಜುಗಳ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಕ್ಕೆ ₹14 ಕೋಟಿ ಹಾಗೂ ಸರ್ಕಾರಿ ಮಹಿಳಾ ಕಾಲೇಜಿಗೆ ₹7.5 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಕಟ್ಟಡಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ” ಎಂದು ತಿಳಿಸಿದರು.
ಸಭೆಯಲ್ಲಿ ಪ್ರಾಂಶುಪಾಲೆ ಎಚ್.ಜಿ.ಸುಗುಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರೊ.ಕೃಷ್ಣಮೂರ್ತಿ, ಅಕ್ಷಯ್ ಕುಮಾರ್, ವೆಂಕಟರಮಣ, ಜಗದೀಶ್ವರರೆಡ್ಡಿ, ಶ್ರೀನಿವಾಸ್, ಪೌರಾಯುಕ್ತ ಜಿ.ಎನ್.ಚಲಪತಿ ಉಪಸ್ಥಿತರಿದ್ದರು.