Chintamani : ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಚಿಂತಾಮಣಿ ನಗರದಲ್ಲಿ ಸರ್ಕಾರಿ ನೌಕರರು ಬೃಹತ್ ಪ್ರತಿಭಟನೆ ನಡೆಸಿದರು.
ಚಿಂತಾಮಣಿ ನಗರದ ಪ್ರವಾಸಿ ಮಂದಿರದ ಬಳಿ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಜಮಾವಣೆಗೊಂಡು ನಗರದ ಖಾಸಗಿ ಬಸ್ ನಿಲ್ದಾಣ ರಸ್ತೆ, ಪಾಲಿಟೆಕ್ನಿಕ್ ರಸ್ತೆ, ಗಜಾನನ ವೃತ್ತ, ಎಂ.ಜಿ.ರಸ್ತೆ, ಚೇಳೂರು ವೃತ್ತ, ಸರ್ಕಾರಿ ಬಸ್ ನಿಲ್ದಾಣದ ರಸ್ತೆ, ಬೆಂಗಳೂರು ವೃತ್ತ, ಜೋಡಿ ರಸ್ತೆಯ ಮೂಲಕ ತಾಲ್ಲೂಕು ಪಂಚಾಯಿತಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಯವರಿಗೆ ಮನವಿ ಸಲ್ಲಿಸಿದರು. ಮೆರವಣಿಗೆಗೆ ತಹಶೀಲ್ದಾರ್ ಹನುಮಂತರಾಯಪ್ಪ ಚಾಲನೆ ನೀಡಿದರು.
ಒಂದೇ ಸ್ಥಳದಲ್ಲಿ ಒಂದೇ ಕೆಲಸವನ್ನು ಮಾಡುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವೆ ವೇತನ ಮತ್ತು ಭತ್ಯೆಗಳಲ್ಲಿ ವ್ಯತ್ಯಾಸವಿರುವುದು ನೌಕರರ ಅಸಮಧಾನಕ್ಕೆ ಕಾರಣವಾಗಿದೆ. ಭಾರತದ 25 ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಯಥಾವತ್ತಾಗಿ ರಾಜ್ಯ ಸರ್ಕಾರಗಳು ಜಾರಿಗೊಳಿಸಿವೆ. ರಾಜ್ಯದಲ್ಲಿ ನ್ಯಾಯಾಲಯಗಳ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಯನ್ನು 2006 ರಿಂದ ಜಾರಿಗೆ ಬರುವಂತೆ ಪೂರ್ವಾನ್ವಯವಾಗಿ ನೀಡಲಾಗಿದೆ. ‘ಸಮಾನ ಕೆಲಸಕ್ಕೆ ಸಮಾನ ವೇತನ’ ತತ್ವದಡಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರದ ವೇತನ, ಭತ್ಯೆಯನ್ನು ಜುಲೈ 2022ರ ಒಳಗಾಗಿ ಮಂಜೂರು ಮಾಡಬೇಕು. ನೂತನ ಪಿಂಚಣಿ ಯೋಜನೆ ನೌಕರರಿಗೆ ಮಾರಕವಾಗಿದ್ದು ರಾಜ್ಯದಲ್ಲಿ NPSಗೆ ಒಳಪಡುವ 2.40 ಲಕ್ಷ ನೌಕರರು ಹಾಗೂ ಅವರ ಕುಟುಂಬಗಳ ಹಿತದೃಷ್ಟಿಯಿಂದ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಿಂದಿನಂತೆ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ರಾಜ್ಯದಲ್ಲಿ ಹುದ್ದೆಗಳ ಮಂಜೂರಾತಿ ಪ್ರಮಾಣವೇ ಕಡಿಮೆಯಾಗಿದ್ದು ನೌಕರರು ಹೆಚ್ಚಿನ ಕಾರ್ಯಭಾರದ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಪ್ರಸ್ತುತ ಸುಮಾರು 7.79 ಲಕ್ಷ ಹುದ್ದೆಗಳು ಮಂಜೂರಾಗಿದ್ದು 5 ಲಕ್ಷ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಆದ್ದರಿಂದ ಸರ್ಕಾರಿ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಷ್ಟಸಾಧ್ಯವಾಗಿದೆ. ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಜನಾರ್ಧನರೆಡ್ಡಿ ತಿಳಿಸಿದರು
ನೌಕರರ ಮನವಿ ಸ್ವೀಕರಿಸಿದ ಜೆ.ಕೆ.ಕೃಷ್ಣಾರೆಡ್ಡಿ ” ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕರ ಗಮನಕ್ಕೆ ತಂದು ಮುಂಬರುವ ಆಧಿವೇಶನದಲ್ಲಿ ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ಆಶ್ವಾಸನೆ ನೀಡಿದರು.
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com