Saturday, July 27, 2024
HomeChintamaniಹಿಂದಿ ಹೇರಿಕೆಯನ್ನು ವಿರೋಧಿಸಿ ಭಾಷಾ ನೀತಿ ಪರಿಶೀಲಿಸಲು ಮನವಿ ಸಲ್ಲಿಕೆ

ಹಿಂದಿ ಹೇರಿಕೆಯನ್ನು ವಿರೋಧಿಸಿ ಭಾಷಾ ನೀತಿ ಪರಿಶೀಲಿಸಲು ಮನವಿ ಸಲ್ಲಿಕೆ

- Advertisement -
- Advertisement -
- Advertisement -
- Advertisement -

Chintamani : ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಕೈಬಿಡಲು (Anti-Hindi) ಹಾಗೂ ಭಾಷಾ ನೀತಿಯನ್ನು ಮರುಪರಿಶೀಲಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಕೋರಿ ಕರ್ನಾಟಕ ರಕ್ಷಣಾ ವೇದಿಕೆಯ (Karnataka Rakshana Vedike) ನಾರಾಯಣಗೌಡ ಬಣದ ಮುಖಂಡರು ಸಂಸದ ಬಿ.ಎನ್.ಬಚ್ಚೇಗೌಡ ಅವರಿಗೆ ಮನವಿ ಸಲ್ಲಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಲೋಕೇಶ್ ನೇತೃತ್ವದ ನಿಯೋಗವು ಸಂಸದರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಮನವಿ ಮಾಡಿದರು.

ಭಾರತ ಸಂವಿಧಾನದಲ್ಲಿ ಉಲ್ಲೇಖಿಸಿರುವ 22 ಭಾಷೆಗಳಿಗೂ ಸಮಾನ ಅವಕಾಶಗಳು ದೊರೆಯಬೇಕು. ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸಮಾನವಾಗಿ ಸೌಲಭ್ಯಗಳನ್ನು ಒದಗಿಸಬೇಕು. ಪ್ರತಿವರ್ಷ ಸೆಪ್ಟೆಂಬರ್ 14 ರಂದು ಆಚರಿಸುವ ಹಿಂದಿ ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸಬೇಕು. ಯಾವ ಭಾಷೆಗೂ ಹೆಚ್ಚಿನ ಮಾನ್ಯತೆ ನೀಡಬಾರದು ಹಾಗೆಯೇ ಯಾವ ಭಾಷೆಯನ್ನು ನಿರ್ಲಕ್ಷಿಸಬಾರದು ಎಂದು ಒತ್ತಾಯಿಸಿದರು.

ಭಾರತ ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಎಲ್ಲಾ 22 ಭಾಷೆಗಳೂ ದೇಶದ ರಾಷ್ಟ್ರೀಯ ಭಾಷೆಗಳಾಗಿವೆ, ಯಾವುದೇ ಭಾಷೆಯನ್ನು ರಾಷ್ಟ್ರಭಾಷೆ ಎಂದು ಘೋಷಣೆ ಮಾಡಿಲ್ಲ. ಆದರೆ ಕೇಂದ್ರ ಸರ್ಕಾರವು ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರಿಕೆ ಮಾಡುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಸುವುದು, ಬ್ಯಾಂಕುಗಳು ಸೇರಿ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಹಿಂದಿ ಬಳಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡ ಹೆಸರಿನಲ್ಲಿ ತೆರಿಗೆದಾರರ ಹಣದಿಂದ ಹಿಂದಿಯೇತರ ರಾಜ್ಯಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಖಂಡನೀಯ. ಯಾವ ಭಾಷೆಗೂ ಇಲ್ಲದ ಆದ್ಯತೆ ಹಿಂದಿಗೆ ಮಾತ್ರ ಏಕೆ ನೀಡಬೇಕು. ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಹಿಂದಿ ಭಾಷಿಗರು ಇತರೆ ಭಾಷೆಗಳ ಜನರಿಗಿಂತ ಹೆಚ್ಚಿನ ಅವಕಾಶಗಳನ್ನು ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

- Advertisement -
RELATED ARTICLES
- Advertisment -

Most Popular

error: Content is protected !!