Wednesday, March 29, 2023
HomeChintamaniಚಿಂತಾಮಣಿಯಲ್ಲಿ ಅ.9 ರಂದು ಉದ್ಯೋಗ ಮೇಳ

ಚಿಂತಾಮಣಿಯಲ್ಲಿ ಅ.9 ರಂದು ಉದ್ಯೋಗ ಮೇಳ

- Advertisement -
- Advertisement -
- Advertisement -
- Advertisement -

Chintamani : ಅಕ್ಟೋಬರ್ 9 ರಂದು ಶನಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚಿಂತಾಮಣಿ ನಗರದ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಲಿಯೋಕ್ಲಬ್ ಆಫ್ ಮಾರ್ಗ್ ಹಾಗೂ ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ವತಿಯಿಂದ ‘ಉದ್ಯೋಗ ಮೇಳ-2021’ (Job Fair 2021) ಆಯೋಜಿಸಲಾಗಿದೆ.

ಮೇಳದಲ್ಲಿ 25ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಹೊಸಬರು ಮತ್ತು ಅನುಭವಿಗಳೂ ಸೇರಿದಂತೆ ಸುಮಾರು 3 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ತಿಳಿಸಲಾಗಿದೆ.

ಎಸ್ಸೆಸ್ಸೆಲ್ಸಿಸಿ, ಪಿಯುಸಿ, ಐಟಿಐ, ಡಿಪ್ಲೊಮೊ, ಪದವಿ, ಸ್ನಾತಕೋತ್ತರ ಪದವಿ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರ ಹಾಗೂ ಅಂಕಪಟ್ಟಿ ಪ್ರತಿಗಳನ್ನು ತರಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9035093146, 7899453857 ಸಂಪರ್ಕಿಸಬಹು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

0.00 avg. rating (0% score) - 0 votes
- Advertisement -
RELATED ARTICLES

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!