Home News Chintamani ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಡಾ.ಎಂ.ಸಿ.ಸುಧಾಕರ್ ಬಣ ನಿರ್ಧಾರ

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಡಾ.ಎಂ.ಸಿ.ಸುಧಾಕರ್ ಬಣ ನಿರ್ಧಾರ

0
434
Chintamni M C Sudhakar Congress

Chintamani : ಚಿಂತಾಮಣಿ ನಗರದ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ (Dr. M C Sudhakar) ಅವರ ನಿವಾಸದಲ್ಲಿ ಗುರುವಾರ ನಡೆದ ಬೆಂಬಲಿಗರ ಹಾಗೂ ಮುಖಂಡರ ಸಭೆಯಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅವರ ಬಣ Congress ಅಭ್ಯರ್ಥಿಗೆ ಬೆಂಬಲ ನೀಡಲು ತೀರ್ಮಾನಿಸಲಾಯಿತು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಚಿಂತಾಮಣಿ ಸುಧಾಕರ್ ಬೆಂಬಲಿಗ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂಬುದನ್ನು ಅರಿತ ಕಾಂಗ್ರೆಸ್ ನಾಯಕರು ಸುಮಾರು 2 ತಿಂಗಳಿನಿಂದ ಒತ್ತಡ ತರುತ್ತಿದ್ದಾರೆ. ಈ ಬಗ್ಗೆ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಮಾತುಕತೆ ನಡೆಸಿದ್ದರು. ಸದ್ಯಕ್ಕೆ ವಿಧಾನ ಪರಿಷತ್‌ ಚುನಾವಣೆಗೆ ಮಾತ್ರ ಈ ಬೆಂಬಲ ಸೀಮಿತವಾಗಿದ್ದು ಮುಂದಿನ ಏಪ್ರಿಲ್-ಮೇ ತಿಂಗಳಿನಲ್ಲಿ ಯಾವುದಾದರೂ ಪಕ್ಷ ಸೇರ್ಪಡೆಯಾಗುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!