Chintamani : ಚಿಂತಾಮಣಿ ನಗರದ ಮುಸ್ಲಿಮರು ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಜಾಮಿಯಾ ಮಸೀದಿಯ ಕಮಿಟಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ (Dr M C Sudhakar) ರವರನ್ನು ಸನ್ಮಾನಿಸಿದರು.(Honor)
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ದೇಶದಲ್ಲೇ ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಮುರುಗಮಲ್ಲ (Murugamalla) ಗ್ರಾಮದ ಅಮ್ಮಾಜಾನ್ ಬಾವಾಜಾನ್ ದರ್ಗಾವು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಕೇಂದ್ರ ಎಂದು ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ಬರುವ ಜನರಿಗೆ ಸೌಲಭ್ಯ ಒದಗಿಸಲು ಸಮಗ್ರವಾಗಿ ಯೋಜನೆ ರೂಪಿಸಿ ರಾಜ್ಯದಲ್ಲೇ ಮಾದರಿ ದರ್ಗಾವನ್ನಾಗಿ ಮಾಡಲು ಪಣ ತೊಟ್ಟಿದ್ದೇನೆ ಮತ್ತು ಈ ಕುರಿತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಜತೆ ಚರ್ಚೆ ನಡೆಸಲಾಗಿದೆ ಎಂದರು.
ಜಾಮಿಯಾ ಮಸೀದಿ ಸಮಿತಿ ಪದಾಧಿಕಾರಿಗಳು ಹಾಗೂ ಅನೇಕ ಮುಸ್ಲಿಂ ಮುಖಂಡರು ಇದ್ದರು.