ಚೌಡರೆಡ್ಡಿಪಾಳ್ಯದಲ್ಲಿ ‘ನಮ್ಮ ಕ್ಲಿನಿಕ್’

- Advertisement -
- Advertisement -

Chintamani: ಚಿಂತಾಮಣಿ ನಗರದ ಚೌಡರೆಡ್ಡಿಪಾಳ್ಯದಲ್ಲಿ ಶನಿವಾರ ನಮ್ಮ ಕ್ಲಿನಿಕ್ (Namma Clinic) ಉದ್ಘಾಟನಾ (Inauguration) ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ (Dr MC Sudhakar) ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು “ಬಡವರಿಗೆ ಉಚಿತ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಉದ್ದೇಶವಾಗಿದ್ದು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಚಿಂತಾಮಣಿ-ಬೆಂಗಳೂರು ಜೋಡಿ ರಸ್ತೆಯಲ್ಲಿ ಓಟಿ ಕೆರೆಯಿಂದ ಪಿಸಿಆರ್ ಕಾಂಪ್ಲೆಕ್ಸ್ ವರೆಗೂ ರಸ್ತೆ ಮತ್ತು ಪಾದಚಾರಿ ಮಾರ್ಗದ ಅಭಿವೃದ್ಧಿಗೆ ಟೆಂಡರ್ ಆಗಿ ಕಾಮಗಾರಿ ಆರಂಭವಾಗಲಿದ್ದು ಐಡಿಎಸ್ಎಂಟಿ ಅಂಗಡಿ ಮಳಿಗೆಗಳ ಮೇಲೆ ಬೀದಿ ಬದಿ ವ್ಯಾಪಾರಿಗಳಿಗಾಗಿ ನೂತನ ಅಂಗಡಿ ಮಳಿಗೆಗಳ ನಿರ್ಮಾಣ, ಕಾಮಕುಂಟೆ ಪ್ರದೇಶದಲ್ಲಿ ಖಾಸಗಿ ಬಸ್ ನಿಲ್ದಾಣ, ಕ್ರೀಡಾ ಕಾಂಪ್ಲೆಕ್ಸ್, ಕಾಮಗಾರಿಯ ಯೋಜನೆ ಪ್ರಕ್ರಿಯೆ ಅಂತಿಮಗೊಂಡಿದೆ”ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್, ನಗರಸಭೆ ಅಧ್ಯಕ್ಷ ಆರ್.ಜಗನ್ನಾಥ್, ಉಪಾಧ್ಯಕ್ಷೆ ಕೆ.ರಾಣಿಯಮ್ಮ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ತಹಶೀಲ್ದಾರ್ ಸುದರ್ಶನ ಯಾದವ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶ್ರೀನಾಥ ಬಾಬು ಮತ್ತು ನಗರಸಭೆ ಸದಸ್ಯರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!