Chintamani : ಚಿಂತಾಮಣಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ (National Voters’ Day) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಧ್ಯಾಪಕ ದಿನೇಶ್ ” ಪ್ರಜಾಪ್ರಭುತ್ವದಲ್ಲಿ ಮತದಾರರು ಚಲಾಯಿಸುವ ಒಂದೊಂದು ಮತವೂ ದೇಶದ ಭವಿಷ್ಯ ರೂಪಿಸುತ್ತದೆ. ಇಂದಿನ ಯುವಕರೇ ಮುಂದಿನ ಪ್ರಜೆಗಳು. 18 ವರ್ಷ ವಯಸ್ಸಿನ ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದ್ದು ಅರ್ಹ ಮತದಾರರು ತಪ್ಪದೆ ಮತದಾನ ಮಾಡಬೇಕು. ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಇತ್ತೀಚೆಗೆ ಮತದಾನ ದಿಕ್ಕು ತಪ್ಪುತ್ತಿದೆ. ಮತದಾರರು ಹಣ, ಹೆಂಡ, ಆಸೆ ಅಮಿಷಗಳಿಗೆ ಬಲಿಯಾಗಿ ಮತದಾನ ಮಾಡುವುದು ಸರ್ವೇ ಸಾಮಾನ್ಯವಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಡಾ.ಕೆ. ಶಾರದಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಅಶ್ವತ್ಥಪ್ಪ ಮತದಾರರ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಧ್ಯಾಪಕರಾದ ತಿಮ್ಮರಾಯಪ್ಪ, ಚಂದ್ರಶೇಖರ್, ಹನುಮಂತಯ್ಯ, ಸುಗುಣ, ಕವಿತಾ, ಟಿ.ಪಿ. ಜ್ಯೋತಿ ಭಾಗವಹಿಸಿದರು.