Chintamani : ಸುಸ್ಥಿರ ಕೃಷಿ ಪದ್ಧತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಚಿಂತಾಮಣಿ ತಾಲೂಕಿನ ಕುರುಬೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ (Kuruburu Agricultural Science Center) ನೈಸರ್ಗಿಕ ಕೃಷಿ (natural farming) ಕುರಿತು ತರಬೇತಿ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ವಿಸ್ತರಣಾ ವಿಜ್ಞಾನಿ ಡಾ.ತನ್ವೀರ್ ಅಹಮದ್ ಅವರು ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು ಮತ್ತು ನೀರಿನ ಮೇಲೆ ಅವೈಜ್ಞಾನಿಕ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳನ್ನು ಬಳಸುವುದರಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಿಳಿಸಿ ಈ ರಾಸಾಯನಿಕಗಳ ಅತಿಯಾದ ಬಳಕೆಯು ಮಣ್ಣಿನ ಭೌತಿಕ, ರಾಸಾಯನಿಕ ಮತ್ತು ಜೈವಿಕ ಗುಣಗಳ ಮಾಲಿನ್ಯ ಮತ್ತು ಅವನತಿಗೆ ಕಾರಣವಾಗುತ್ತಿದೆ, ಇದು ಮಣ್ಣಿನ ಫಲವತ್ತತೆ ಮತ್ತು ಉತ್ಪಾದಕತೆಯ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆಯ ರೈತ ಮಹಿಳೆಯರು ಪಾಲ್ಗೊಂಡಿದ್ದರು.