Chintamani : ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ (Town Police Station) ಗುರುವಾರ Covid-19 ಮಾರ್ಗಸೂಚಿಗಳನ್ನು (Guidelines) ಪಾಲಿಸುವ ಕುರಿತು ವ್ಯಾಪಾರಿಗಳು, ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರ ಸಭೆಯನ್ನು (Public Meeting) ASP ಕುಶಾಲ್ ಚೌಕ್ಸೆ ಹಮ್ಮಿಕೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಕುಶಾಲ್ ಚೌಕ್ಸೆ “ರಾಜ್ಯದಲ್ಲಿ ದಿನೇ ದಿನೇ Coronavirus ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ (Weekend Curfew) ಘೋಷಿಸಿದ್ದು ವ್ಯಾಪಾರಸ್ಥರು, ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜನವರಿ 19 ರವರೆಗೂ ಸರ್ಕಾರ ರಾತ್ರಿ 10 ಗಂಟೆಯಿಂದ ಬೆಳಗಿನಜಾವ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ (Night Curfew) ಜಾರಿ ಮಾಡುವ ಜೊತೆಗೆ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೂ ವೀಕೆಂಡ್ ಕರ್ಫ್ಯೂ ವಿಧಿಸಿದೆ. ಹೋಟೆಲ್‌ಗಳು (Hotel), ಸಿನಿಮಾ ಮಂದಿರಗಳು (Movie Theatres) ಮತ್ತಿತರ ವಾಣಿಜ್ಯ ಸ್ಥಳಗಳಲ್ಲಿ ಶೇ.50 ರಷ್ಟು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಬೇಕು. ಮದುವೆ ಮತ್ತಿತರ ಸಮಾರಂಭಗಳಲ್ಲಿ ಹೊರಾಂಗಣವಾದರೆ 200 ಮಂದಿ ಒಳಾಂಗಣವಾದರೆ 100 ಮಂದಿಗೆ ಮಾತ್ರ ಅವಕಾಶ. ಇದನ್ನು ಕಡ್ಡಾಯವಾಗಿ ಪಾಲಿಸಬೇಕು, ಇಲ್ಲದಿದ್ದರೆ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.
ಇನ್‌ಸ್ಪೆಕ್ಟರ್ ರಂಗಸ್ವಾಮಯ್ಯ, ಸಬ್ ಇನ್‌ಸ್ಪೆಕ್ಟರ್ ನಾಗೇಂದ್ರ ಪ್ರಸಾದ್, ವಾಸವಿ ಸುರೇಶ್, ಡಾ.ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.