Home News Chintamani Chintamani – ಗಣರಾಜ್ಯೋತ್ಸವ ದಿನಾಚರಣೆ

Chintamani – ಗಣರಾಜ್ಯೋತ್ಸವ ದಿನಾಚರಣೆ

0
587
Chintamani Republic Day 2022

Chintamani : ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ (Jhansi Rani Lakshmi Bai Stadium) ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಬುಧವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ (Republic Day) ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ದೇಶ ಸ್ವಾತಂತ್ರ್ಯಗೊಂಡ ನಂತರ ಪ್ರಜಾಪ್ರಭುತ್ವವನ್ನು ಮುನ್ನೆಡಸಲು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಆಡಳಿತ ನಡೆಸಲು ಅಗತ್ಯವಾದ ಕಾನೂನಿನ ವಿಧಿವಿಧಾನಗಳನ್ನು ರೂಪಿಸಲು ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ರಚನಾ ಸಮಿತಿ ರಚಿಸಲಾಗಿತ್ತು. ಅವರು ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿದರು. ಅವುಗಳಲ್ಲಿರುವ ಉತ್ತಮ ಅಂಶಗಳನ್ನು ತೆಗೆದುಕೊಂಡು ದೇಶಕ್ಕೆ ಅನುಗುಣವಾದ ಕಾನೂನು ಗುಚ್ಛವುಳ್ಳ ಸಂವಿಧಾನ ರಚಿಸಿದರು. ಅದು 1950ರ ಜ. 26ರಂದು ಅಧಿಕೃತವಾಗಿ ಅನುಷ್ಠಾನಕ್ಕೆ ಬಂದಿತು” ಎಂದು ಹೇಳಿದರು.

DySP ಎಸ್.ಟಿ. ಚಂದ್ರಶೇಖರ್, ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಅಕ್ಷಯ್ ಕುಮಾರ್, ತಾ.ಪಂ. EO ಮಂಜುನಾಥ್, ಪೌರಾಯುಕ್ತ ಉಮಾಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್, ಉಪಾಧ್ಯಕ್ಷೆ ಸುಹಾಸನಿ ರೆಡ್ಡಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!