Chintamani : ಚಿಂತಾಮಣಿ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ನಿವೃತ್ತ ನೌಕರರ ಸಂಘದ (Retired Employees Association) ವಾರ್ಷಿಕ ಮಹಾಸಭೆಯಲ್ಲಿ ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘಕ್ಕೆ ನಾರಾಯಣಸ್ವಾಮಿ ಅವರು ಅಧ್ಯಕ್ಷರಾಗಿ (President) ಎರಡನೇ ಅವಧಿಗೆ ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರ ಸ್ಥಾನಕ್ಕೆ ನಾರಾಯಣಸ್ವಾಮಿ ಹೆಸರನ್ನು ಸದಸ್ಯ ಎ.ಎಸ್. ರಾಮಚಂದ್ರಮೂರ್ತಿ ಸೂಚಿಸಿದ್ದು, ಸೈಯದ್ ಗಫಾರ್ ಅನುಮೋದಿಸಿದರು. ಸದಸ್ಯರು ಕೈ ಎತ್ತುವ ಮೂಲಕ ಒಪ್ಪಿಗೆ ಸೂಚಿಸಿದರು.
ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದಿಂದ ಕಳೆದ 5 ವರ್ಷಗಳಿಂದ ಕೆಲಸ ನಿರ್ವಹಿಸಿದ್ದು ಮುಂದಿನ ದಿನಗಳಲ್ಲೂ ಇದೇ ರೀತಿಯ ಸಹಕಾರ ನೀಡಬೇಕು. ತಾಲ್ಲೂಕಿನ ಎಲ್ಲಾಇಲಾಖೆಗಳ ನಿವೃತ್ತ ನೌಕರರು ಸಂಘದ ಸದಸ್ಯರಾಗಿದ್ದು ಮುಂದಿನ ಮಾಸಿಕ ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗುವುದು ಎಂದು ನಾರಾಯಣಸ್ವಾಮಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur