Home News Chintamani ರಸ್ತೆ ಅಪಘಾತ; ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತ; ಸವಾರ ಸ್ಥಳದಲ್ಲೇ ಸಾವು

0
536
Chikkaballapur District Chintamani Bolero Car Bike road Accident

Chintamani : ಕಾರು, ದ್ವಿಚಕ್ರವಾಹನ ಡಿಕ್ಕಿ ಹೊಡೆದು ರಸ್ತೆ ಅಪಘಾತ (Road Accident) ಸಂಭವಿಸಿದ್ದು, ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ- ಶ್ರೀನಿವಾಸಪುರ (Chintamani – Srinivasapur) ರಸ್ತೆಯ ಶಿಂಗನಹಳ್ಳಿ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ.

ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿ ಗ್ರಾಮದ ಖಾಜಾ ಷರೀಫ್ (28) ಅಪಘಾತದಲ್ಲಿ ಮೃತಪಟ್ಟಿದ್ದು, ಚಿಂತಾಮಣಿಯಿಂದ ಶ್ರೀನಿವಾಸಪುರ ಕಡೆಗೆ ಹೋಗುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಖಾಜಾ ಷರೀಫ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರಿನ ಚಾಲಕ ಅಪಘಾತ ಸ್ಥಳದಲ್ಲಿ ನಿಲ್ಲಿಸದೆ ಹೊರಟು ಹೋಗಿದ್ದಾನೆ ಎಂದು ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!