ನೂತನ RTO ಕಚೇರಿ ನಿರ್ಮಾಣಕ್ಕೆ ಭೂಮಿ ಪೂಜೆ

- Advertisement -
- Advertisement -

Chintamani : ಚಿಂತಾಮಣಿ ನಗರ ಹೊರವಲಯದ ಅಂಬಾಜಿದರ್ಗ ಹೋಬಳಿಯ ಕೋನಪ್ಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6.5 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಟ್ರಾಕ್ ಸಮೇತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ(Regional Transport Office-RTO) ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಬುಧವಾರ ಶಾಸಕ ಎಂ.ಕೃಷ್ಣಾರೆಡ್ಡಿ (M Krishnareddy) ಭೂಮಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ಜಿಲ್ಲೆಯಲ್ಲಿ ಎಲ್ಲೂ ಇಲ್ಲದಂತಹ ಟ್ರಾಕ್ ಸಮೇತ ಸಾರಿಗೆ ಅಧಿಕಾರಿಗಳ ಕಚೇರಿಯು 7-8 ತಿಂಗಳಲ್ಲಿ ನಿರ್ಮಾಣವಾಗಲಿದೆ. 12 ಸಾವಿರ ಚದರ ಅಡಿಯಲ್ಲಿ ಕಚೇರಿ ನಿರ್ಮಾಣವಾಗುತ್ತಿದ್ದು, ಉಳಿದ ಜಾಗದಲ್ಲಿ ಟ್ರಾಕ್ ನಿರ್ಮಿಸಲಾಗುತ್ತದೆ. ಕಟ್ಟಡದ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ತಿಳಿಸಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!