Thursday, April 18, 2024
HomeChintamaniಶ್ರೀಗಂಧದ ಮರಗಳ ಕಳ್ಳತನ : ರೈತರ ಪ್ರತಿಭಟನೆ

ಶ್ರೀಗಂಧದ ಮರಗಳ ಕಳ್ಳತನ : ರೈತರ ಪ್ರತಿಭಟನೆ

- Advertisement -
- Advertisement -
- Advertisement -
- Advertisement -

Chintamani : ಚಿಂತಾಮಣಿ ತಾಲ್ಲೂಕಿನಾದ್ಯಂತ ಶ್ರೀಗಂಧದ ಮರಗಳ ಕಳ್ಳತನ (Santalum Theft) ನಿರಂತರವಾಗಿ ನಡೆಯುತ್ತಿದ್ದು ಈ ಪ್ರಕರಣಗಳನ್ನು ಭೇದಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀಗಂಧ ಬೆಳೆಗಾರರು ಭಾನುವಾರ ಚಿಂತಾಮಣಿ ಗ್ರಾಮಾಂತರ ಠಾಣೆ ಮುಂದೆ ಧರಣಿ (Farmers Protest) ನಡೆಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಶ್ರೀಗಂಧ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ “ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 8–10 ದಿನಗಳಲ್ಲಿ ಆರು ತೋಟಗಳಿಂದ 150 ಮರಗಳು ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಮೂರು ರೈತರ ತೋಟಗಳಲ್ಲಿ ಕಳ್ಳತನವಾಗಿದ್ದು ಪೊಲೀಸ್ ಇಲಾಖೆ ಇದೆಯೇ ಅಥವಾ ಇಲ್ಲವೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಸರ್ಕಾರ ಶ್ರೀಗಂಧದ ಮರ ಬೆಳೆಸಲು ಪ್ರೋತ್ಸಾಹ ನೀಡುತ್ತಿದೆ. ಅರಣ್ಯ ಇಲಾಖೆ ಮರಗಳನ್ನು ಬೆಳೆಸಲು ಅನುಮತಿ ನೀಡಿ, ಸಸಿಗಳನ್ನು ಒದಗಿಸುತ್ತಿದೆ. ರೈತರು 10–15 ವರ್ಷಗಳಿಂದ ಕಷ್ಟಪಟ್ಟು ಬೆಳೆದ ಮರಗಳು ರಾತ್ರೋರಾತ್ರಿ ಕಳ್ಳತನವಾಗುತ್ತಿವೆ. ಆದರೆ, ಈ ಸಂಬಂಧ ಪೊಲೀಸರು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ತಿಳಿಸಿದರು.

ಗ್ರಾಮಾಂತರ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಶಿವರಾಜ್ ಬೆಳೆಗಾರರೊಂದಿಗೆ ಮಾತುಕತೆ ನಡೆಸಿ ಕಳ್ಳರ ಪತ್ತೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಧರಣಿಯಲ್ಲಿ ಶ್ರೀಗಂಧದ ಬೆಳೆಗಾರರ ಸಂಘದ ಪದಾಧಿಕಾರಿಗಳು ಹಾಗೂ ಬೆಳೆಗಾರರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!