Chintamani : ಚಿಂತಾಮಣಿ–ಬೆಂಗಳೂರು ರಾಜ್ಯ ಹೆದ್ದಾರಿಯ ತಳಗವಾರ (Talagavaara) ಸಮೀಪದ ಮಸ್ತೇನಹಳ್ಳಿ ಕೈಗಾರಿಕಾ ಪ್ರಾಂಗಣದ ತಿರುವಿನಲ್ಲಿ ಗುರುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ (Pedestrian Accident) ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಪಟ್ಟಣದ 65 ವರ್ಷದ ಶಿವಪ್ಪ ಎಂದು ಗುರುತಿಸಲಾಗಿದೆ. ಅವರು ಕೈವಾರದ ಲೋಕೇಶ್ ಎಂಬುವವರ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸಿಸುತ್ತಿದ್ದರು.
ಗುರುವಾರ ರಾತ್ರಿ ಕೆಲಸದ ನಿಮಿತ್ತ ತಳಗವಾರ ಗ್ರಾಮಕ್ಕೆ ತೆರಳಿದ್ದ ಶಿವಪ್ಪ, ವಾಪಸ್ಸು ನಡೆದುಕೊಂಡು ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಕೈವಾರ ಹೊರ ಠಾಣೆಯ ಎಎಸ್‌ಐ ಪ್ರಕಾಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವರಾಜ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.