Chintamani : ಚಿಂತಾಮಣಿ ನಗರದ ಝಾನ್ಸಿ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಗುರುವಾರ ಹೋಬಳಿ ಹಂತದ (Hobli Level) ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಪಟುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ (Taluk Level Sports Meet) ನಡೆಯಿತು.
ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತಾನಾಡಿದ ತಹಶೀಲ್ದಾರ್ ಹನುಮಂತರಾಯಪ್ಪ “ಮಾನಸಿಕ ಆರೋಗ್ಯಕ್ಕೆ ದೈಹಿಕ ಆರೋಗ್ಯ ಪೂರಕವಾಗಿದ್ದು ಆರೋಗ್ಯವಾದ ಶರೀರದಲ್ಲಿ ಆರೋಗ್ಯಕರವಾದ ಮನಸ್ಸಿರುತ್ತದೆ. ಕ್ರೀಡಾಪಟುಗಳು ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪಠ್ಯ ಚಟುವಟಿಕೆಗಳಿಗೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು” ಎಂದು ಹೇಳಿದರು.
ತಾಲ್ಲುಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಅಶೋಕ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ರವಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಜನಾರ್ಧನರೆಡ್ಡಿ, ದೈಹಿಕ ಶಿಕ್ಷಣ ಪರಿವೀಕ್ಷಕ ಜಿ.ಸುಂದರೇಶ್, ಇ.ಸಿ.ಒ ಎಆಜಣ್ಣ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಸ್.ಫಕೃಸಾಬಿ, ಕೆ.ಎ.ಮಂಜುನಾಥ್, ಜಿ.ನರಸಿಂಹಪ್ಪ, ಶ್ರೀರಾಮರೆಡ್ಡಿ ಹಾಗೂ ದೈಹಿಕ ಶಿಕ್ಷಕರು ಈ ಸಂಧರ್ಭದಲ್ಲಿ ಭಾಗವಹಿಸಿದ್ದರು.